ತಿರುವನಂತಪುರಂ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮತ ಎಣಿಕೆ ಬಿರುಸಿನಿಂದ ಸಾಗಿದೆ. ಸಂಜೆ ವೇಳೆಗೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳಳಂ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ ಹಾಗೂ ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಚುರುಕುಗೊಂಡಿದೆ. ಯಾವ ರಾಜ್ಯದಲ್ಲಿ ಯಾವ ರಾಜಕೀಯ ಪಕ್ಷ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಕುತೂಹಲ ಹೆಚ್ಚಿದೆ.
ಕೇರಳಂದಲ್ಲಿ ಮತ ಎಣಿಕೆ ಬಿರುಸುಗೊಂಡಿದ್ದು, ಕಾಂಗ್ರೆಸ್ ಮೈತ್ರಿಕೂಡ ಮುನ್ನಡೆ ಸಾಧಿಸಿದೆ. ಯುಡಿಎಫ್ 77 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಎಲ್ ಡಿಎಫ್ 56 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎನ್ ಡಿಎ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಕೇರಳಂ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಬೃಹತ್ ಎಲ್ ಇಡಿ ಸ್ಕ್ರೀನ್ ಮೂಲಕ ಫಲಿತಾಂಶ ವೀಕ್ಷಿಸುತ್ತಿದ್ದು, ಪ್ರತಿಬಾರಿ ಮುನ್ನಡೆಯಾಗುತ್ತಿದ್ದಂತೆ ಕಾರ್ಯಕರ್ತರು ಚಪ್ಪಾಳೆ ತಟ್ಟಿ ಸಂಭ್ರಮಿಸುತ್ತಿದ್ದಾರೆ.

