HomeBusinessಗೃಹ ಜ್ಯೋತಿ ಯೋಜನೆ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್…! ಜೂ. 1 ರಿಂದಲೇ...

ಗೃಹ ಜ್ಯೋತಿ ಯೋಜನೆ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್…! ಜೂ. 1 ರಿಂದಲೇ ವಿದ್ಯುತ್ ದರ ಹೆಚ್ಚಳ

ಬೆಂಗಳೂರು: ಗೃಹಜ್ಯೋತಿ ಯೋಜನೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ. ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ.

ಪ್ರತಿ ಯೂನಿಟ್ ವಿದ್ಯುತ್ ದರ 70 ಪೈಸೆ ಹೆಚ್ಚಳ ಮಾಡಿ KERC ಆದೇಶ ಹೊರಡಿಸಿದೆ. ಮೇ 12ರಂದು KERC ವಿದ್ಯುತ್ ಪರಿಷ್ಕರಣೆ ಮಾಡಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ವಿದ್ಯುತ್ ದರ ಜೂ. 1 ರಿಂದಲೇ ಜಾರಿಯದಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಏಪ್ರಿಲ್ 1 ರಿಂದ ಹೊಸ ದರ ಅನ್ವಯವಾಗಲಿದೆ ಎಂದು KERC ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ದರ ಹೆಚ್ಚಳ ಆದೇಶಕ್ಕೆ ತಡೆ ಬಿದ್ದಿತ್ತು. ಈಗ ಜೂನ್ 1 ರಿಂದ ಪರಿಷ್ಕೃತವನ್ನು ಕೆಇಆರ್‌ಸಿ ಜಾರಿ ಮಾಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular