HomeEntertainment'ಕೆರೆಬೇಟೆ' ಚಿತ್ರದ ಟೈಟಲ್ ಸಾಂಗ್ ರಿಲೀಸ್

‘ಕೆರೆಬೇಟೆ’ ಚಿತ್ರದ ಟೈಟಲ್ ಸಾಂಗ್ ರಿಲೀಸ್

ಗೌರಿಶಂಕರ್ ಅಭಿನಯದ ‘ಕೆರೆ ಬೇಟೆ’ ಚಿತ್ರದ ಟೈಟಲ್ ಸಾಂಗ್ ಅನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಭರ್ಜರಿ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ‘ಮಳಿ ಆತು ಬೆಳಿ ಆತು’ ಎಂಬ ಹಳ್ಳಿ ಸೊಗಡಿನ ಈ ಹಾಡಿಗೆ ಕರಿಬಸವ ಧ್ವನಿಯಾಗಿದ್ದು, ಗಗನ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಪ್ರಮೋದ್ ಮರವಂತೆ ಸಾಹಿತ್ಯವಿದೆ.

ಈ ಚಿತ್ರದಲ್ಲಿ ಗೌರಿಶಂಕರ್ ಹಾಗೂ ಬಿಂದು ಶಿವರಾಂ ಪ್ರಮುಖ ಪಾತ್ರದಲ್ಲಿದ್ದು, ಗೋಪಾಲ್ ದೇಶಪಾಂಡೆ, ಸಂಪತ್ ಮೈತ್ರಿಯ, ಹರಿಣಿ ಶ್ರೀಕಾಂತ್, ಚಿಲ್ಲರ್ ಮಂಜು, ರಾಕೇಶ್ ಪೂಜಾರಿ, ವರ್ಧನ್ ತೀರ್ಥಹಳ್ಳಿ, ರಾಮದಾಸ್, ರಘುರಾಜನಂದ ಮತ್ತು ಶೇಖರ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ.

ಜನಮನ ಸಿನಿಮಾಸ್  ಬ್ಯಾನರ್ ನಲ್ಲಿ ಜೈ ಶಂಕರ್ ಪಾಟೀಲ್ ನಿರ್ಮಾಣ ಮಾಡಿದ್ದು, ಗಗನ್ ಸಂಗೀತ ಸಂಯೋಜನೆ ನೀಡಿದ್ದಾರೆ. ಜ್ಞಾನೇಶ್ ಬಿ ಮಾತಾಡ್ ಸಂಕಲನ, ಡಿಫ್ರೆಂಟ್ ಡ್ಯಾನಿ ಮತ್ತು ಟೈಗರ್ ಶಿವು ಸಾಹಸ ನಿರ್ದೇಶನ, ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular