ತಿರುವನಂತಪುರಂ: ಕೇರಳಂ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ ಜಾರಿ ನಿರ್ದೇಶನಾಲಯ (ED)ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿ ಖಂಡಿಸಿ ಎಡಪಕ್ಷಗಳ ಕಾರ್ಯಕರ್ತರು ಹಾಗೂ ಪಿಣರಾಯಿ ವಿಜಯನ್ ಬೆಂಬಲಿಗರು ಇಡಿ ಅಧಿಕಾರಿಗಳ ಕಾರಿ ಮೇಲೆ ದಾಳಿ ನಡೆಸಿದ್ದಾರೆ.
ಕೇರಳಂ ರಾಜಧಾನಿ ತಿರುವನಂತಪುರಂನಲ್ಲಿರುವ ಪಿಣರಾಯಿ ವಿಜಯನ್ ನಿವಾಸದ ಬಳಿ ಇಡಿ ಅಧಿಕಾರಿಗಳ ಕಾರಿನ ಮೇಲೆ ಕಾರ್ಯಕರ್ತರು ಹೆಲ್ಮೇಟ್ ಹಾಗೂ ಇಟ್ಟಿಗೆಗಳಿಂದ ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು ಪಿಣರಾಯಿ ವಿಯನ್ ನಿವಾಸದಲ್ಲಿ ಶೋಧ ನಡೆಸಿ ತೆರಳುತ್ತಿದ್ದಾಗ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಇಡಿ ಅಧಿಕಾರಿಗಳ ಕಾರಿನ ಗಾಜು ಪುಡಿ ಪುಡಿ ಮಾಡಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳಿಕ ಪೊಲೀಸರ ನೆರವಿನಲ್ಲಿ ಇಡಿ ಅಧಿಕಾರಿಗಳು ಮುಂದೆ ತೆರಳಿದ್ದಾರೆ. ಎಡಪಕ್ಷಗಳ ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಲು ಪೊಲೀಸರು ಲಾಠಿ ಬೀಸಿದ್ದಾರೆ. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

