HomeLatest NewsBIG NEWS: ಹಾವು ಕಚ್ಚಿ ದುರಂತ: ಕಾಂಗ್ರೆಸ್ ಮುಖಂಡ ಕೇತನ್ ಭಾಟಿಕರ್ ದುರ್ಮರಣ

BIG NEWS: ಹಾವು ಕಚ್ಚಿ ದುರಂತ: ಕಾಂಗ್ರೆಸ್ ಮುಖಂಡ ಕೇತನ್ ಭಾಟಿಕರ್ ದುರ್ಮರಣ

ಪಣಜಿ: ವಿಷಪೂರಿತ ಹಾವು ಕಚ್ಚಿದ ಪರಿಣಾಮ ಗೋವಾ ಕಾಂಗ್ರೆಸ್ ಮುಖಂಡ ಕೇತನ್ ಭಾಟಿಕರ್ ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಅವರಿಗೆ ಕೇವಲ 38 ವರ್ಷ ವಯಸ್ಸಾಗಿತ್ತು.

ಗೋವಾ-ಕರ್ನಾಟಕ ಗಡಿ ಭಾಗದಲ್ಲಿ ಕರ್ಮಲ್ ಘಾಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೇತನ್ ಭಾಟಿಕರ್ ದಾಂಡೇಲಿಗೆ ತೆರಳುತ್ತಿದ್ದಾಗ ವಾಹನದಿಂದ ಕೆಳಗಿಳಿದಿದ್ದರು. ಈ ವೇಳೆ ಹಾವು ಕಚ್ಚಿದ್ದು, ಚಿಕಿತ್ಸೆ ಫಲಿಸದೇ ಕೇತನ್ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನ ಯುವ ನಾಯಕನಾಗಿದ್ದ ಕೇತ ಭಾಟಿಕರ್ ಅಕಾಲಿಕ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಗುರುವಾರ ರಾತ್ರಿ ಕೇತನ್ ಭಾಟಿಕರ್ ಅವರು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಗೋವಾ-ಕರ್ನಾಟಕ ಗಡಿಯಲ್ಲಿರುವ ಕರ್ಮಲ್ ಘಾಟ್ ಬಳಿ ಯಾವುದೋ ಕಾರಣಕ್ಕಾಗಿ ವಾಹನದಿಂದ ಕೆಳಗಿಳಿದಾಗ ಹಾವೊಂದು ಕಡಿದಿದೆ.

ತಕ್ಷಣ ಅವರನ್ನು ಗೋವಾದ ಧಾರವಾಡೋರಾದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ, ಅವರು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಕೇತನ್ ಭಾಟಿಕರ್ ಅವರು ಫೋಂಡಾ ಉಪಚುನಾವಣೆಗೆ ಇವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಹೈಕೋರ್ಟ್ ತೀರ್ಪಿನಿಂದಾಗಿ ಉಪಚುನಾವಣೆ ರದ್ದಾಗಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಸದ್ಯ ಪ್ರಕರಣ ವಿಚಾರಣೆಯ ಹಂತದಲ್ಲಿರುವಾಗಲೇ ಅವರು ಹಾವು ಕಡಿದು ದುರಂತ ಅಂತ್ಯ ಕಂಡಿದ್ದಾರೆ.

ಕೇತನ್ ಭಾಟಿಕರ್ ನಿಧನಕ್ಕೆ ಗೋವಾ ವಿಧಾನಸಭೆಯ ವಿಪಕ್ಷದ ನಾಯಕ ಯೂರಿ ಅಲೆಮಾವೊ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಕೇತನ್ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಪ್ರಾರ್ಥಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular