ರಾಜ್ಯದಲ್ಲಿ ʻಹುಕ್ಕಾ ಬಾರ್ʼ ನಿಯಂತ್ರಣಕ್ಕೆ ಮಹತ್ವದ ಕ್ರಮ : ಶೀಘ್ರವೇ ಕಾನೂನು

ಬೆಳಗಾವಿ : ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಯಂತ್ರಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದ್ದು, ಶೀಘ್ರವೇ ಹುಕ್ಕಾ ಬಾರ್‌ ನಿಯಂತ್ರಕ್ಕೆ ಕಾನೂನು ರೂಪಿಸುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಸರ್ಕಾರ ಡ್ರಗ್ಸ್ ಹಾಗೂ ಮಾದಕ ಪದಾರ್ಥಗಳ ಮಾರಾಟವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಆರೋಗ್ಯ, ಆಹಾರ ಇಲಾಖೆಗಳೊಂದಿಗೆ ಚರ್ಚಿಸಿ ಶೀಘ್ರವೇ ಹುಕ್ಕಾ ಬಾರ್ ನಿಯಂತ್ರಣಕ್ಕೆ ಕಾನೂನು ರೂಪಿಸುವುದಾಗಿ ತಿಳಿಸಿದ್ದಾರೆ.

ಹುಕ್ಕಾ ಬಾರ್ ಸ್ಥಾಪನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಯಾವುದೇ ರೀತಿಯ ವ್ಯಾಪಾರ ಪರವಾನಿಗೆ ನೀಡುವುದಿಲ್ಲ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ದಿಂದ ಪರವಾನಿ ಪಡೆದು ವ್ಯಾಪಾರಿಗಳು ಹುಕ್ಕಾ ಬಾರ್‍ಗಳನ್ನು ನಡೆಸುತ್ತಿದ್ದಾರೆ. ನ್ಯಾಯಲಯವು ಸಹ ಹುಕ್ಕಾ ಸೇದುವವರಿಗೆ ಪ್ರತ್ಯೇಕ ಸ್ಥಳ ನಿಗದಿ ಪಡಿಸಬೇಕು ಎಂದು ಹೇಳಿದೆ. ನಿಯಂತ್ರಣದ ಬಗ್ಗೆ ಹೇಳಿಲ್ಲ. ಆದರೂ ಯುವ ಜನಾಂಗದ ಸ್ವಾಥ್ಯದ ದೃಷ್ಠಿಯಿಂದ ಹುಕ್ಕಾ ಬಾರ್ ನಿಯಂತ್ರಣಕ್ಕೆ ಕಾನೂನೂ ರೂಪಿಸಲಾಗುವುದು  ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read