ಕಾಫಿನಾಡಲ್ಲಿ KFD ಉಲ್ಬಣ: ಒಂದೇ ದಿನ ನಾಲ್ವರಲ್ಲಿ ಸೋಂಕು ದೃಢ: ಔಷಧವಿಲ್ಲದ ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಹೆಚ್ಚಿದ ಆತಂಕ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಒಂದೇ ದಿನ ನಾಲ್ವರಲ್ಲಿ ಕೆ.ಎಫ್.ಡಿ. ದೃಢಪಟ್ಟಿದೆ.

ಕೊಪ್ಪ, ಎನ್.ಆರ್. ಪುರ ತಾಲೂಕಿನ ನಾಲ್ವರಲ್ಲಿ ಕೆ.ಎಫ್.ಡಿ. ತಗುಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ 18 ಜನರಲ್ಲಿ ಕೆಎಫ್‌ಡಿ ಕೇಸ್ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು ಸೋಂಕಿತರಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಔಷಧವಿಲ್ಲದ ಮಂಗನ ಕಾಯಿಲೆ ಜನರಲ್ಲಿ ಆತಂಕ ಸೃಷ್ಟಿಸಿದೆ. ಕಾಡಿಗೆ ತೆರಳದಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮಂಗನ ಕಾಯಿಲೆ ಪತ್ತೆಯಾದ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಿದ್ದಾರೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read