ಚಿಕ್ಕಮಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೆ.ಎಫ್.ಡಿ. ದೃಢ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಮಂಗಳವಾರ ಒಂದೇ ದಿನ ಎರಡು KFD(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಕೊಪ್ಪದ ಕೆಸವೆ ವ್ಯಕ್ತಿ ಮತ್ತು ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಮಸೀದಿ ಕೆರೆಯಲ್ಲಿ ತಲಾ ಒಂವೊಂದು ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಜನವರಿಯಲ್ಲಿ ಒಟ್ಟು ನಾಲ್ಕು ಪ್ರಕರಣ ಪತ್ತೆಯಾಗಿವೆ. ಜ್ವರದಿಂದ ಬಳಲುತ್ತಿರುವವರು ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ರಕ್ತ ಪರೀಕ್ಷೆ ನಡೆಸಲಾಗುತ್ತಿದೆ.

ಮಂಗಳವಾರ ಇಬ್ಬರಲ್ಲಿ ಕೆ.ಎಫ್.ಡಿ. ಕಾಣಿಸಿಕೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಇತ್ತೀಚಿಗೆ ಚಿಕ್ಕಮಗಳೂರು ತಾಲೂಕು ಕಡಬಗೆರೆ ಗ್ರಾಮದ 26 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಪಾಲ್ ಗ್ರಾಮದ 46 ವರ್ಷದ ವ್ಯಕ್ತಿಗೂ ಕೆ.ಎಫ್.ಡಿ. ಕಾಣಿಸಿಕೊಂಡಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read