HomeLatest NewsBIG NEWS: ಚಿಕ್ಕಮಗಳೂರಿನಲ್ಲಿ ಮತ್ತೆ ಮಂಗನ ಕಾಯಿಲೆ ಹೆಚ್ಚಳ: ಇಬ್ಬರಲ್ಲಿ ಸೋಂಕು ಪತ್ತೆ

BIG NEWS: ಚಿಕ್ಕಮಗಳೂರಿನಲ್ಲಿ ಮತ್ತೆ ಮಂಗನ ಕಾಯಿಲೆ ಹೆಚ್ಚಳ: ಇಬ್ಬರಲ್ಲಿ ಸೋಂಕು ಪತ್ತೆ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಮಂಗನ ಕಾಯಿಲೆ ಹೆಚ್ಚುತ್ತಿದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಕೆಲ ದಿನಗಳ ಹಿಂದೆ ಓರ್ವರಲ್ಲಿ ಕೆ.ಎಫ್.ಡಿ ಸೋಂಕು ಪತ್ತೆಯಾಗಿತ್ತು. ಈಗ ಮತ್ತೋರ್ವ ಯುವಕನಲ್ಲಿ ಸೋಂಕು ದೃಢಪಟ್ಟಿದೆ.

ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನಲ್ಲಿ ಕೆ.ಎಫ್.ಡಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಗ್ರಾಮದಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ. ಗ್ರಾಮದ 30 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತನನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಸೋಂಕಿತನಿಗೆ ಮಣಿಪಾಲ್ ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗನ ಕಾಯಿಲೆ ಹಿನ್ನೆಲೆಯಲ್ಲಿ ಕಟ್ಟಿಮನೆ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರಲ್ಲಿ ಶುಚಿತ್ವದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳ್ಕೊಡಿ ಗ್ರಾಮದ 6 ಜನರಿಗೆ ಮಂಗನ ಕಾಯಿಲೆ ಪತ್ತೆಯಾಗಿತ್ತು. ಇದೀಗ ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಸೋಂಕು ಕಂಡುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular