SHOCKING: ರಾಜ್ಯದಲ್ಲಿ ಮಂಗನ ಕಾಯಿಲೆ ಉಲ್ಬಣ, ಒಂದೇ ದಿನ ಮೂವರು ಬಲಿ

ಬೆಂಗಳೂರು: ಮಲೆನಾಡು ಕರಾವಳಿ ಪ್ರದೇಶದಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದ್ದು, ಒಂದೇ ದಿನ ಮೂವರು ಬಲಿಯಾಗಿದ್ದಾರೆ.

ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.)ಯಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಒಬ್ಬರು, ಚಿಕ್ಕಮಗಳೂರು 5, ಉತ್ತರ ಕನ್ನಡ 3 ಮಂದಿ ಸಾವನ್ನಪ್ಪಿದ್ದಾರೆ.

ಭಾನುವಾರ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕು ಮೇಲ್ಪಾಲ್ ಗ್ರಾಮದ ನಿವಾಸಿ ಬಸವ(71) ಸಾವನ್ನಪ್ಪಿದ್ದಾರೆ. ಫೆಬ್ರವರಿ 24ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸೋಮವಾರ ಕೊಪ್ಪ ತಾಲೂಕಿನಲ್ಲಿ ಇಬ್ಬರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ. ಕಲ್ಲೂರು ಗ್ರಾಮದ ಮಂಜಪ್ಪ(65) ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಇದೇ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಗ್ಗೆಕೊಪ್ಪದ 80 ವರ್ಷದ ವೃದ್ಧ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read