ಮಂಗನ ಕಾಯಿಲೆ ಪೀಡಿತ ಪ್ರದೇಶಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಶಿವಮೊಗ್ಗ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ ನ.26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನ.26 ರಂದು ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ, ಸಾಗರಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ.  ಮಧ್ಯಾಹ್ನ 3 ಗಂಟೆಗೆ ಸಾಗರ ತಾಲೂಕಿನ ತಾಳಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಿರೆಮನೆ ಹಾಗೂ ತಲವಾಟ ಗ್ರಾಮಗಳಲ್ಲಿ ಮಂಗನಕಾಯಿಲೆ(ಕೆ.ಎಫ್.ಡಿ) ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

4 ಗಂಟೆಗೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಸಾಗರದ ಪ್ರವಾಸಿ ಮಂದಿರದಲ್ಲಿ ಮಂಗನಕಾಯಿಲೆ ಕಂಡುಬಂದಿರುವ ಜಿಲ್ಲೆಗಳಲ್ಲಿ ಕೈಗೊಂಡಿರುವ/ಕೈಗೊಳ್ಳಬೇಕಾಗಿರುವ ಸುರಕ್ಷಾ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7 ಗಂಟೆಗೆ ಸಾಗರದಿಂದ ಶಿವಮೊಗ್ಗಕ್ಕೆ ಆಗಮಿಸಿ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಲಿದ್ದಾರೆ.

ನ. 27ರಂದು ಬೆಳಗ್ಗೆ 8.20ಕ್ಕೆ ಭದ್ರಾವತಿಗೆ ತೆರಳಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.  ಬೆ. 9.25ಕ್ಕೆ ಭದ್ರಾವತಿಯಿಂದ ಶಿವಮೊಗ್ಗ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ: 2.15ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read