BIG NEWS: ಮಲೆನಾಡಿನಲ್ಲಿ ಮಂಗನ ಕಾಯಿಲೆ ಪತ್ತೆ; ಆತಂಕದಲ್ಲಿ ಜನ

ಮಲೆನಾಡಿನಲ್ಲಿ ಈ ವರ್ಷದ ಮೊದಲ ಮಂಗನ ಕಾಯಿಲೆ ಪತ್ತೆಯಾಗಿದ್ದು, ಇದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೊಪ್ಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಈ ಕಾಯಿಲೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದ್ದು ಈ ವೇಳೆ ಮಂಗನ ಕಾಯಿಲೆ (ಕೆ ಎಫ್ ಡಿ) ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇದೀಗ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಈ ವ್ಯಕ್ತಿ ವಾಸವಾಗಿದ್ದ ಸ್ಥಳದ ಸುತ್ತಮುತ್ತಲಿರುವವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಶಂಕಿತ ಜ್ವರದ ಪ್ರಕರಣಗಳು ಪತ್ತೆಯಾದಲ್ಲಿ ಕೂಡಲೇ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read