ಹೈಕಮಾಂಡ್ ನಿರ್ಧಾರ ಸ್ವಾಗತಿಸಿದ ಸಚಿವ ಮುನಿಯಪ್ಪ: ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪಣ

ಬೆಂಗಳೂರು: ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಯಾವುದೇ ರೀತಿಯ ಬೇಸರವಿಲ್ಲ. ಅಂತಿಮವಾಗಿ ಕಾಂಗ್ರೆಸ್ ಗೆಲ್ಲುವುದು ಮುಖ್ಯ. ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಹೆಸರನ್ನೇ ಫೈನಲ್ ಮಾಡಲಾಗಿತ್ತು. ಆದರೆ, ಒಮ್ಮತ ಬಾರದ ಕಾರಣ ಗೌತಮ್ ಗೆ ಟಿಕೆಟ್ ನೀಡಲಾಗಿದೆ. ನಮಗೆ ಟಿಕೆಟ್ ತಪ್ಪಿಸಿದವರ ಬಗ್ಗೆ ಮಾತನಾಡುವುದು ಬೇಡ. ನಾವೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

7 ಬಾರಿ ಸಂಸದನಾಗಿ, 10 ವರ್ಷ ಕೇಂದ್ರ ಮಂತ್ರಿಯಾಗಿ, CWC ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಲೋಕಸಭೆಯಲ್ಲಿ ಸೋತ ನಂತರ ಪಕ್ಷ ನನ್ನನ್ನು ಶಾಸಕನಾಗಿ ಮಂತ್ರಿಯಾಗಿ ಮಾಡಿದೆ ಎಂದು ಹೇಳಿದ್ದಾರೆ.

ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಯಾವುದೇ ರೀತಿಯ ಬೇಸರವಿಲ್ಲ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಹೈಕಮಾಂಡ್ ನನ್ನನ್ನು ಕರೆದು ಮಾತನಾಡಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಸಂತೋಷವಾಗಿ ಕೆಲಸ ಮಾಡುತ್ತೇನೆ. ನಾನು ಕೇಂದ್ರದಲ್ಲಿಯೂ ಕೆಲಸ ಮಾಡಿದ್ದೇನೆ. ಸ್ವಪ್ರತಿಷ್ಠೆಗಳು ಏನೂ ಇಲ್ಲ. ಈ ರೀತಿಯ ಘಟನೆಗಳು ನನಗೆ ಎರಡರಿಂದ ಮೂರು ಸಲ ಆಗಿವೆ. ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮೊದಲೇ ಹೇಳಿದ್ದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read