HomeKarnatakaಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಅನ್ನಭಾಗ್ಯ’ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ತಕ್ಷಣ...

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಅನ್ನಭಾಗ್ಯ’ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ತಕ್ಷಣ ಹಣ ವರ್ಗಾವಣೆಗೆ ಸೂಚನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಆಹಾರ ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು, ಕಾನೂನು ಮಾಪನ ಶಾಸ್ತ್ರ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ನಂತರ ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

5 ಕೆಜಿ ಹೆಚ್ಚುವರಿ ಅಕ್ಕ ಬದಲಿಗೆ ಅನ್ನಭಾಗ್ಯ ಯೋಜನೆ ಅಡಿ ನೀಡುವ ಹಣವನ್ನು ಎಲ್ಲಾ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಸರ್ವರ್ ಸಮಸ್ಯೆಯಾಗಿದ್ದಲ್ಲಿ ಕೂಡಲೇ ಬಗೆಹರಿಸಬೇಕು. ಅನ್ನ ಭಾಗ್ಯ ಯೋಜನೆಯ ಎಲ್ಲಾ ಸಾಮಗ್ರಿಗಳನ್ನು ಸಮರ್ಪಕವಾಗಿ ಸರಿಯಾದ ಸಮಯಕ್ಕೆ ಪಡಿತರ ಚೀಟಿದಾರರಿಗೆ ತಲುಪಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಆಹಾರ ಇಲಾಖೆಯ ಆಹಾರ ಧಾನ್ಯ ವಿತರಣೆ, ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ತಾಕೀತು ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular