HomeKarnatakaಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಒಟ್ಟಿಗೆ ಎರಡು ತಿಂಗಳ ರೇಷನ್ ವಿತರಣೆ

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಒಟ್ಟಿಗೆ ಎರಡು ತಿಂಗಳ ರೇಷನ್ ವಿತರಣೆ

ಶಿವಮೊಗ್ಗ: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಮಾರ್ಚ್ ತಿಂಗಳಿನಲ್ಲಿ ಫೆಬ್ರವರಿ ಮತ್ತು ಮಾರ್ಚ್ ಎರಡು ತಿಂಗಳಿನದ್ದು ಸೇರಿಸಿ 10 ಕೆಜಿ ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2.90 ಲಕ್ಷ ಪಡಿತರ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗಿದೆ. ಇವುಗಳಲ್ಲಿ 1.65 ಲಕ್ಷ ಕಾರ್ಡ್ ಗಳನ್ನು ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಆಗ ಕೇಂದ್ರ ಸರ್ಕಾರ ಮತ್ತು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಅಕ್ಕಿ ಕೊಡಲಿಲ್ಲ. ಈಗ ಅಕ್ಕಿ ಕೊಡುವುದಾಗಿ ಮುಂದೆ ಬಂದಿದ್ದಾರೆ. ಹೀಗಾಗಿ ಫೆಬ್ರವರಿ ತಿಂಗಳಿಂದಲೇ ಹಣದ ಬದಲು ಅಕ್ಕಿ ವಿತರಣೆ ಮಾಡುತ್ತೇವೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನದ್ದು ಸೇರಿಸಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular