ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಹಣದ ಬದಲಿಗೆ ಹೆಚ್ಚುವರಿಯಾಗಿ 5 ಕೆಜಿ ಆಂಧ್ರದ ಅಕ್ಕಿ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ.

ಇದರಿಂದಾಗಿ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ವಿತರಣೆ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಈ ಕುರಿತಾಗಿ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಆಂಧ್ರಪ್ರದೇಶದ ಆಹಾರ ಇಲಾಖೆ ಸಚಿವ ಕಾರುಮುರಿ ವೆಂಕಟನಾಗೇಶ್ವರರಾವ್ ನೇತೃತ್ವದ ನಿಯೋಗ ಚರ್ಚೆ ನಡೆಸಿದೆ.

ಬೆಂಗಳೂರಿನಲ್ಲಿ ಉಭಯ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಎಫ್‌ಸಿಐ ನಿಗದಿಪಡಿಸಿದ ದರದಲ್ಲಿ ಅಕ್ಕಿ ಪೂರೈಕೆ ಮಾಡಲು ಅವಕಾಶ ನೀಡುವ ಜೊತೆಗೆ ನಿರ್ದಿಷ್ಟ ಪ್ರಮಾಣವನ್ನು ತಿಳಿಸಬೇಕು. ಆದಷ್ಟು ಬೇಗನೆ ಅನುಮತಿ ನೀಡಿದಲ್ಲಿ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ನಿಯೋಗ ಹೇಳಿದೆ.

ನಿಯೋಗದ ಜತೆ ವಿಸ್ತೃತ ಚರ್ಚೆ ನಡೆಸಿದ ಸಚಿವ ಮುನಿಯಪ್ಪ, ಮಾತುಕತೆಯ ವಿವರಗಳ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಒಪ್ಪಿಗೆ ಪಡೆದು ನಿಮಗೆ ಮಾಹಿತಿ ನೀಡುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read