ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಸಚಿವ ಮುನಿಯಪ್ಪ ಹೇಳಿಕೆ: ಹಿರಿಯರು ಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಸಲಹೆ

ಬೆಂಗಳೂರು: ಎರಡೂವರೆ ವರ್ಷಕ್ಕೆ ಹಳಬರೆಲ್ಲರೂ ಸಚಿವ ಸ್ಥಾನದಿಂದ ಕೆಳಗಿಳಿದು ಉಳಿದವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಸಚಿವ ಮುನಿಯಪ್ಪ ನೀಡಿರುವ ಹೇಳಿಕೆ ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿರುವುದು ಮಾತ್ರವಲ್ಲ, ರಾಜಕೀಯ ವಲಯದಲ್ಲಿಯೂ ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಯ್ಕೆ ಮಾಡುವುದು ಹೈಕಮಾಂಡ್ ನಿರ್ಧಾರ. ಎರಡೂವರೆ ವರ್ಷದ ನಂತರ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡುವುದು ಒಳ್ಳೆಯದು. ಮೊದಲ ಬಾರಿ ಸಚಿವರಾದವರನ್ನು ಹೊರತುಪಡಿಸಿ ಹಳಬರು ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿದು ಹೊಸಬರಿಗೆ ಅವಕಾಶ ಕಲ್ಪಿಸಿ ಕೊಡಬೇಕು. ಈ ಮೂಲಕ ದೇಶದಲ್ಲಿ ಹೊಸ ಪರಂಪರೆ ಆರಂಭಿಸಬೇಕು. ಇದು ನನ್ನ ವೈಯಕ್ತಿಕ ಸಲಹೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read