ಬೆಂಗಳೂರು: ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ ತೀರ್ಮಾನ ಕೈಗೊಳ್ಳಲಾಯಿತು. ಪ್ರತಿ ತಿಂಗಳ ಮೊದಲ ಶನಿವಾರ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯವಾಗಿ ಧರಿಸಬೇಕು.
ಖಾದಿ ಬಟ್ಟೆಗಳನ್ನು ನೌಕರರು ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಳಿಗೆಗಳಲ್ಲಿಯೇ ಖರೀದಿ ಮಾಡಬೇಕು. ಇದಕ್ಕೆ ಖಾದಿ ಗ್ರಾಮೋದ್ಯೋಗ ಮಂಡಳಿ ರಿಯಾಯಿತು ನೀಡಬೇಕು. ಈಗ ನೀಡುತ್ತಿರುವ ರಿಯಾಯಿತಿಗಿಂತ ಶೇ.5ರಷ್ಟು ಹೆಚ್ಚು ರಿಯಾಯಿತಿ ನೀಡಬೇಕು.
ಪುರುಷರು ನೌಕರರು ಖಾದಿ ಬಟ್ಟೆ ಪ್ಯಾಂಟ್, ಶರ್ಟ್, ಓವರ್ ಕೋಟ್ ಧರಿಸಬೇಕು. ಮಹಿಳೆಯರು ರೇಶ್ಮೆ ಸೀರೆ, ಚೂಡಿದಾರ್ ಧರಿಸುವಂತೆ ಸೂಚನೆ ನೀಡಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ.

