ಇಸ್ರೇಲ್ ಹಾಗೂ ಅಮೆರಿಕ ಜಂಟಿ ದಾಳಿಯಲ್ಲಿ ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲ ಅಲ್ಲಿ ಖಾಮಿನೈ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ವಿಶ್ವದ ವಿವಿಧ ಪ್ರದೇಶಗಳಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಶನಿವಾರ ( ಫೆಬ್ರವರಿ 28 ) ಬೆಳಗ್ಗೆ ಖಾಮಿನೈ ಅವರು ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆದಿದ್ದು, ಆ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ದೃಢಪಡಿಸುವೆ ಎಂದು ಅಲ್ ಜಝೀರಾ ವರದಿ ಮಾಡಿದೆ.
ಈ ಸುದ್ದಿ ಹೊರಬೀಳುತ್ತಿದ್ದಂತೆ ಪಾಕಿಸ್ತಾನದ ಕರಾಚಿ ನಗರದಲ್ಲಿ ಹಲವಾರು ಮಂದಿ ರಸ್ತೆಗಳಿದು ಇಸ್ರೇಲ್ ಹಾಗೂ ಅಮೆರಿಕ ವಿರುದ್ಧ ಘೋಷಣೆ ಕೂಗುತ್ತಾ ಅಲ್ಲಿನ ಅಮೆರಿಕ ರಾಯಭಾರಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

