ಖಾನಾಪುರ: ಜಮೀನಿನಲ್ಲಿ ಕಳೆ ತೆಗೆಯುತ್ತಿದ್ದಾಗ ತನ್ನದೇ ಜಮೀನಲ್ಲಿದ್ದ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಕಕ್ಕೇರಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಕಕ್ಕೇರಿ ಗ್ರಾಮದ ನಿವಾಸಿ ಮಲ್ಲಯ್ಯ ದುಂಡಯ್ಯ ಹಿರೇಮಠ (52) ಮೃತ ರೈತ. ಮಲ್ಲಯ್ಯ ತಮ್ಮ ಹೊಲದ ಕೃಷಿ ಹೊಂಡದ ಸುತ್ತಮುತ್ತ ಕಳೆ ತೆಗೆಯುವಾಗ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ.
ಅವರಿಗೆ ಈಜಲು ಬಾರದಿದ್ದುದರಿಂದ ಹೊಂಡದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

