HomeIndiaಪಂಚ ರಾಜ್ಯ ಚುನಾವಣೆ ಫಲಿತಾಂಶ: ಡಿ. 6 ರಂದು ದೆಹಲಿಯಲ್ಲಿ I.N.D.A.I. ಮೈತ್ರಿಕೂಟದ ಮಹತ್ವದ ಸಭೆ

ಪಂಚ ರಾಜ್ಯ ಚುನಾವಣೆ ಫಲಿತಾಂಶ: ಡಿ. 6 ರಂದು ದೆಹಲಿಯಲ್ಲಿ I.N.D.A.I. ಮೈತ್ರಿಕೂಟದ ಮಹತ್ವದ ಸಭೆ

ನವದೆಹಲಿ: 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಇಂದು ಮಿಜೋರಾಂ ರಾಜ್ಯದ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೇ ಡಿಸೆಂಬರ್ 6ರಂದು ದೆಹಲಿಯಲ್ಲಿ ‘ಇಂಡಿಯಾ’(I.N.D.A.I.) ಮೈತ್ರಿಕೂಟದ ನಾಯಕರು ಸಭೆ ನಡೆಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೈತ್ರಿಕೂಟದ ಎಲ್ಲಾ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ, ತೆಲಂಗಾಣ, ಮಿಜೋರಾಂ ಚುನಾವಣಾ ಫಲಿತಾಂಶ ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿಕ್ಸೂಚಿ ಆಗಿರುವುದರಿಂದ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈತ್ರಿಕೂಟದ ನೇತೃತ್ವವನ್ನು ನಿತೀಶ್ ಕುಮಾರ್ ವಹಿಸಿಕೊಳ್ಳಬೇಕೆಂಬ ಅಭಿಪ್ರಾಯ ಕೇಳಿ ಬಂದಿದ್ದು, ಈ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular