HomeKarnatakaಅಂಬೇಡ್ಕರ್ ಗೆ ಅವಮಾನ ಮಾಡಿ ಅವರ ಹೆಸರಲ್ಲೇ ಮತ ಕೇಳ್ತಿದ್ದಾರೆ: ಮೋದಿ ವಿರುದ್ಧ ಖರ್ಗೆ ಗುಡುಗು

ಅಂಬೇಡ್ಕರ್ ಗೆ ಅವಮಾನ ಮಾಡಿ ಅವರ ಹೆಸರಲ್ಲೇ ಮತ ಕೇಳ್ತಿದ್ದಾರೆ: ಮೋದಿ ವಿರುದ್ಧ ಖರ್ಗೆ ಗುಡುಗು

ಹಾಸನ: ಅಂಬೇಡ್ಕರ್ ಗೆ ಅವಮಾನ ಮಾಡಿ ಅವರ ಹೆಸರಿನಲ್ಲಿಯೇ ಮತ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ನವರು 91 ಬಾರಿ ಅವಮಾನ ಮಾಡಿದ್ದಾರೆ ಎಂದು ಮೋದಿ ಹೇಳಿಕೆ ಪ್ರಸ್ತಾಪಿಸಿ ಪ್ರಧಾನಿ ಮೋದಿ ಎಲ್ಲವನ್ನು ಎಣಿಸಿಕೊಂಡಿರಬೇಕು ಎಂದು ಹಾಸನ ಜಿಲ್ಲೆ ಅರಕಲಗೂಡಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟಾಂಗ್ ಕೊಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಲಿತರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗಾಂಧಿ ಕುಟುಂಬ, ನೆಹರುಗೆ ಇವರು ಎಷ್ಟು ಬಾರಿ ಬೈದಿದ್ದಾರೆ ಅನ್ನುವುದನ್ನು ಮೋದಿ ಹೇಳಲಿ ಎಂದು ಸವಾಲ್ ಹಾಕಿದ್ದಾರೆ.

ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿತ್ತು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಖರ್ಗೆ, ಅಂಬೇಡ್ಕರ್ ಬಗ್ಗೆ ಓದಿ ತಿಳಿದುಕೊಳ್ಳಿ. ಅಂಬೇಡ್ಕರ್ ಮಾಡಿದ ಕಾನೂನು ಪಾಲಿಸುತ್ತಿದ್ದೀರಿ. ಅಂಬೇಡ್ಕರ್ ಸಂವಿಧಾನ ಬರೆಯಲು ಅವಕಾಶ ನೀಡಿದ್ವಿ. ಆಗ ಮೋದಿ ಕಡೆಯವರು ಇದ್ರಾ, ಆರ್.ಎಸ್.ಎಸ್.ನವರು ಇದ್ರಾ ಎಂದು ಪ್ರಶ್ನಿಸಿದ್ದಾರೆ.

ನಾವು ಭಾರತ್ ಜೋಡೋ ಎಂದು ಹೇಳುತ್ತೇವೆ. ನೀವು ಸಮಾಜ್ ತೋಡೋ ಅನ್ನುತ್ತೀರಿ. ಬಿಜೆಪಿಯವರು ಸಂವಿಧಾನ ವಿರೋಧಿಗಳು. ನೀವು ನಮಗೆ ಪಾಠ ಹೇಳುತ್ತೀರಾ? ಡಬಲ್ ಇಂಜಿನ್ ಸರ್ಕಾರ ಎಲ್ಲಿದೆ? ಅದರಲ್ಲಿ ಒಂದು ಇಂಜಿನ್ ಫೇಲ್ ಆಗಿದೆ ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular