HomeKarnatakaಪ್ರಧಾನಿ ತಂದೆಯನ್ನು ನಿಂದಿಸಿದ ಸೀನಿಯರ್ ಖರ್ಗೆಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ಪ್ರಧಾನಿ ತಂದೆಯನ್ನು ನಿಂದಿಸಿದ ಸೀನಿಯರ್ ಖರ್ಗೆಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ನವದೆಹಲಿ-ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಅವರ ತಂದೆಯವರ ಬಗ್ಗೆ ನಾಲಿಗೆ ಜಾರಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ರಾಜಕೀಯ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆ. ಅವರ ಮಾತು ಮಾನವೀಯತೆಯ ಅಣಕ ಹಾಗೂ ಅವರಲ್ಲಿ ಅಡಗಿರುವ ನಿಗೂಢ ಕ್ರೂರ ಮನಃಸ್ಥಿತಿಯ ಪ್ರತೀಕ. ಅದುವೇ ಇಂತಹ ನುಡಿಮುತ್ತುಗಳನ್ನು ನುಡಿಸಿರಬೇಕು ಎಂದು ಹರಿಹಾಯ್ದಿದ್ದಾರೆ.

‘ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎಂದು ಶ್ರೀ ಪುರಂದರದಾಸರು ಸುಮ್ಮನೆ ಹೇಳಿದ್ದಲ್ಲ, ಬಹುಶಃ ಇಂಥ ನಾಲಿಗೆಗಳನ್ನು ತಿದ್ದಬೇಕು ಎಂಬ ಉದ್ದೇಶದಿಂದಲೇ ಹೇಳಿರಬೇಕು. ಖರ್ಗೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ತಂದೆಯ ವಿರುದ್ಧ ಖರ್ಗೆಯ ಟೀಕೆ

ಪ್ರಧಾನಿಗಳ ತಂದೆಯವರನ್ನು ರಾಜಕೀಯ ಟಾರ್ಗೆಟ್ ಮಾಡಿಕೊಂಡು ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ. ಅವರ ವರ್ತನೆ ಕೇವಲ ಹತಾಶೆಯಷ್ಟೇ ಅಲ್ಲ, ನಾಚಿಕೆಗೇಡಿತನದ್ದು. ಇದು ಕಾಂಗ್ರೆಸ್ ಪಕ್ಷದ ಅಧಃಪತನದ ಪರಮಾವಧಿ. ಖರ್ಗೆ ಅವರು ಪ್ರಧಾನಿಗಳ ಕ್ಷಮೆ ಕೇಳಿ ತಮ್ಮ ಹಿರಿತನದ ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular