HomeKarnatakaಶ್ರೀನಿವಾಸ ಮಾನೆಗೆ ಹೊಸ ಜವಾಬ್ದಾರಿ: ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ನೇಮಕ

ಶ್ರೀನಿವಾಸ ಮಾನೆಗೆ ಹೊಸ ಜವಾಬ್ದಾರಿ: ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ನೇಮಕ

ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ಸರ್ಕಾರ ಪ್ರಮುಖ ಜವಾಬ್ದಾರಿಯೊಂದನ್ನು ವಹಿಸಿದೆ. ಅವರನ್ನು ಕರ್ನಾಟಕ ಗೃಹ ಮಂಡಳಿಯ (KHB) ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಕಚೇರಿಯಿಂದ ಅಧಿಕೃತ ಟಿಪ್ಪಣಿ ರವಾನೆಯಾಗಿದ್ದು, ಶ್ರೀನಿವಾಸ್ ಮಾನೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲು ತಿಳಿಸಲಾಗಿದೆ.

https://x.com/uniindianews/status/2088158981772734533

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಸ್ಥಾನದ ಆಕಾಂಕ್ಷಿಗೆ ನಿಗಮ-ಮಂಡಳಿ ಹೊಣೆ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಂಪುಟ ಸೇರ್ಪಡೆಯಾಗಲು ಶ್ರೀನಿವಾಸ್ ಮಾನೆ ತೀವ್ರ ಕಸರತ್ತು ನಡೆಸಿದ್ದರು. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ, ಇದೀಗ ಪ್ರಭಾವಿ ನಿಗಮ-ಮಂಡಳಿಯಾದ ಗೃಹ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಅಸಮಾಧಾನ ಶಮನಕ್ಕೆ ಮುಂದಾಗಿದ್ದಾರೆ.

ಶೀಘ್ರದಲ್ಲೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (DPAR) ಈ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಆದೇಶ ಪತ್ರ ಹೊರಬೀಳಲಿದೆ. ಹಾನಗಲ್ ಉಪಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾನೆ ಅವರಿಗೆ ಈ ಹುದ್ದೆ ನೀಡಿರುವುದು ಅವರ ಬೆಂಬಲಿಗರಲ್ಲಿ ಸಂತಸ ಮೂಡಿಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular