HomeLatest NewsBREAKING: ಕೆಂಪೇಗೌಡ ಏರ್ ಪೋರ್ಟ್ ಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ

BREAKING: ಕೆಂಪೇಗೌಡ ಏರ್ ಪೋರ್ಟ್ ಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ ಬಂದಿದೆ. ದುಷ್ಕರ್ಮಿಗಳು ವಿಮಾನ ನಿಲ್ದಾಣದ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಸಂದೇಶ ರವಾನಿಸಿದ್ದಾರೆ. ಮೂರು ಆರ್ ಡಿಎಕ್ಸ್, ಐಇಡಿ ಬಳಸಿ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ ಹಕಿದ್ದಾರೆ. ಆತ್ಮಾಹುತಿ ಬಾಂಬ್ ದಾಳಿ ನಡೆಸುತ್ತೇವೆ ಎಂದು ಸಂದೇಶ ರವಾನಿಸಿದ್ದಾರೆ.

[email protected] ಹೆಸರಿನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಎಚ್ಚೆತ್ತ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಏರ್ ಪೋರ್ಟ್ ನಲ್ಲಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular