ಬೆಂಗಳೂರು: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಹಾರಟದಲ್ಲಿ ವ್ಯತ್ಯಯವುಂಟಾಗಿದೆ.
ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯವವಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ 20 ಹೆಚ್ಚು ವಿಮಾನಗಳು ವಿಳಂಬವಾಗಲಿವೆ.
ಏರ್ ಪೋರ್ಟ್ ಸುತ್ತಮುತ್ತ ದಟ್ಟ ಮಂಜು ಕವಿದ ವಾತಾವರಣವಿದ್ದು, ಇದರಿಂದ ರನ್ ವೇ ಸಮರ್ಪಕವಾಗಿ ಕಾಣದ ಸ್ಥಿತಿ ಇರುವುದರಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿವೆ. 20ವಿಮಾನಗಳು ವಿಳಂಬವಾಗಿ ಸಂಚರಿಸಲಿವೆ ಎಂದು ತಿಳಿದುಬಂದಿದೆ.
