HomeKarnatakaKIADBಯಲ್ಲಿ 16 ಕೋಟಿ ರೂ.ವಂಚನೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

KIADBಯಲ್ಲಿ 16 ಕೋಟಿ ರೂ.ವಂಚನೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬಳ್ಳಾರಿ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಬಳ್ಳಾರಿಯ ಕಚೇರಿಯಲ್ಲಿ ನಡೆದ 16 ಕೋಟಿ ರೂಪಾಯಿಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಪ್ರಕಟಣೆ ಹೊರಡಿಸಿದ್ದಾರೆ. ಬಂಧಿತ ಆರೋಪಿಯನ್ನು ಸಂತೋಷ್ ಕುಮಾರ್ (33) ಎಂದು ಗುರುತಿಸಲಾಗಿದೆ.

2022ರಿಂದ 2026ರ ಮಾರ್ಚ್​ವರೆಗಿನ ಅವಧಿಯಲ್ಲಿ (ಮೂವರು ಕಾರ್ಯಪಾಲಕ ಅಭಿಯಂತರರ ಅವಧಿಯಲ್ಲಿ) ಈ ವಂಚನೆ ನಡೆದಿರುವ ಆರೋಪ ಕೇಳಿಬಂದಿದೆ. ಕೆಐಎಡಿಬಿ ಬಳ್ಳಾರಿ ವಲಯ ಕಚೇರಿಯ ಗುತ್ತಿಗೆ ನೌಕರ ಹಾಗೂ ಖಾಯಂ ನೌಕರರು ಮತ್ತು ಬ್ಯಾಂಕ್ ಸಿಬ್ಬಂದಿಯವರು ಸೇರಿಕೊಂಡು, ನಕಲಿ ಸಹಿ ಬಳಸಿ, ಮಂಡಳಿಯ ಖಾತೆಯಿಂದ 16.17 ಕೋಟಿ ರೂ. ಹಣವನ್ನು, ಮಂಡಳಿಗೆ ಸಂಬಂಧವಿಲ್ಲದವರ ಖಾತೆಗಳಿಗೆ ವರ್ಗಾವಣೆ ಮಾಡಿರುವ ಆರೋಪ ಇದಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಂತೆ, ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕಳೆದ ತಿಂಗಳ ಮಾರ್ಚ್​​​ 19ರಂದು, ಅಪರಾಧ ಸಂಖ್ಯೆ 65/2026 ಕಲಂ 316(2), 316(4), 316 (5), 318 (4), 336 (2), 336 (3), 340 (2), 3(5), ಬಿಎನ್‌ಎಸ್ ಕಾಯಿದೆ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಎಪಿಎಂಸಿ ಠಾಣೆ ಪೊಲೀಸರು ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಂತೋಷ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಮುಂದುವರೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular