HomeLatest News'ಟಾಕ್ಸಿಕ್' ಅಂಗಳದಿಂದ ಬಂತು ಬಿಗ್ ಅಪ್‌ಡೇಟ್: ನಾದಿಯಾ ಪಾತ್ರದಲ್ಲಿ ಮಿಂಚಲಿದ್ದಾರೆ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ!

‘ಟಾಕ್ಸಿಕ್’ ಅಂಗಳದಿಂದ ಬಂತು ಬಿಗ್ ಅಪ್‌ಡೇಟ್: ನಾದಿಯಾ ಪಾತ್ರದಲ್ಲಿ ಮಿಂಚಲಿದ್ದಾರೆ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ!

ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ ಇಡೀ ದೇಶವೇ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಸಿನಿಮಾ ‘ಟಾಕ್ಸಿಕ್’ ಮೇಲೆ ಕಣ್ಣಿಟ್ಟಿದೆ. ಈ ಬಹುನಿರೀಕ್ಷಿತ ಸಿನಿಮಾದ ಕುರಿತು ಇಂದು ಮಹತ್ವದ ಅಪ್‌ಡೇಟ್ ಹೊರಬಿದ್ದಿದ್ದು, ನಟಿ ಕಿಯಾರಾ ಅಡ್ವಾಣಿ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಸಿನಿಮಾದಲ್ಲಿ ಅವರು ‘ನಾದಿಯಾ’ ಎಂಬ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.

ಕುತೂಹಲ ಮೂಡಿಸಿದ ಕಿಯಾರಾ ಲುಕ್ ಯಶ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಕಿಯಾರಾ ಅವರ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಅವರನ್ನು ‘ನಾದಿಯಾ’ ಪಾತ್ರಕ್ಕೆ ಬರಮಾಡಿಕೊಂಡಿದ್ದಾರೆ. ಬಿಡುಗಡೆಯಾದ ಪೋಸ್ಟರ್‌ನಲ್ಲಿ ಕಿಯಾರಾ ಕಪ್ಪು ಬಣ್ಣದ ಗೌನ್ ಧರಿಸಿ, ಕಣ್ಣೀರು ಹಾಕುತ್ತಿರುವಂತೆ ಕಂಡುಬಂದಿದ್ದಾರೆ. ಈ ಲುಕ್ ನೋಡಿದ ಅಭಿಮಾನಿಗಳು ಹಾರ್ಲೆ ಕ್ವಿನ್ ಅಥವಾ ಲೇಡಿ ಜೋಕರ್‌ನಂತೆ ಕಾಣುತ್ತಿದ್ದಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು ವಯಸ್ಕರಿಗಾಗಿ ತಯಾರಾದ ಒಂದು ವಿಭಿನ್ನ ಫೇರಿ ಟೇಲ್ ಎನ್ನಲಾಗಿದೆ.

ತಾರಾಗಣದಲ್ಲಿ ಯಾರಿದ್ದಾರೆ? ಬರಿ ಯಶ್ ಮತ್ತು ಕಿಯಾರಾ ಅಷ್ಟೇ ಅಲ್ಲದೆ ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇದೆ. ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರಂತಹ ಪ್ರಮುಖ ನಟಿಯರು ಈ ಸಿನಿಮಾದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುಗಾದಿ ಹಬ್ಬಕ್ಕೆ ಸಿನಿಮಾ ಬಿಡುಗಡೆ ‘ಟಾಕ್ಸಿಕ್’ ಸಿನಿಮಾವು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಳ್ಳುತ್ತಿದ್ದು, ಒಟ್ಟು ಆರು ಭಾಷೆಗಳಲ್ಲಿ ತೆರೆಗೆ ಬರಲಿದೆ. 2026ರ ಮಾರ್ಚ್ 19ರಂದು ಯುಗಾದಿ ಹಬ್ಬದ ಪ್ರಯುಕ್ತ ಈ ಚಿತ್ರ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಕಿಯಾರಾ ಅಡ್ವಾಣಿ ಅವರು ತಾಯಿ ಆದ ನಂತರ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಸ್ಯಾಂಡಲ್‌ವುಡ್‌ಗೆ ಇವರ ಪದಾರ್ಪಣೆ ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular