ಕಿಚ್ಚನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಜು. 2 ರಂದು 46 ನೇ ಚಿತ್ರದ ಟೀಸರ್ ರಿಲೀಸ್

ಜುಲೈ 2 ರಂದು  ನಟ  ಕಿಚ್ಚ ಸುದೀಪ್ ( Actor Sudeep )  ಅಭಿನಯದ 46 ನೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

ಹೌದು, ಜುಲೈ 2 ರಂದು ಬೆಳಗ್ಗೆ 11:46 ಕ್ಕೆ ಕಿಚ್ಚನ ಟೀಸರ್ ರಿಲೀಸ್ ಆಗಲಿದ್ದು, ಈ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬೀಳಲಿದೆ. ಈ ಬಗ್ಗೆ ಚಿತ್ರದ ನಿರ್ಮಾಪಕ ಕಲೈಪುಲಿ ಎಸ್ ತನು ಮಾಹಿತಿ ಹಂಚಿಕೊಂಡಿದ್ದಾರೆ.
ಹೊಸ ಸಿನಿಮಾವನ್ನು ತಮಿಳಿನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್ ತನು ನಿರ್ಮಿಸುತ್ತಿದ್ದು, ಸಿನಿಮಾದ ಪಾತ್ರವರ್ಗದ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ.

ನಟ ಕಿಚ್ಚ ಸುದೀಪ್ (kiccha sudeep) ಮುಂದಿನ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕುತೂಹಲವಿದ್ದು, ಸುದೀಪ್ ಚಿತ್ರಕ್ಕೆ ಸದ್ಯ K 46 ಎನ್ನುವ ಹೆಸರು ಮಾತ್ರ ಇದ್ದು, ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹೊರ ಬಿದ್ದಿಲ್ಲ. ವಿಕ್ರಾಂತ್ ರೋಣ’ ಸಿನಿಮಾ ಬಿಡುಗಡೆ ಬಳಿಕ ಅವರು ಒಂದು ಬ್ರೇಕ್ ತೆಗೆದುಕೊಂಡ ಕಿಚ್ಚ ಸುದೀಪ್ ನಂತರ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಬ್ಯುಸಿಯಾಗಿದ್ದರು. ನಂತರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read