HomeEntertainmentಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಚಿತ್ರದ ಟೀಸರ್ ರಿಲೀಸ್

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದ ಟೀಸರ್ ರಿಲೀಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ‘ಮ್ಯಾಕ್ಸ್’ ಚಿತ್ರದ ಟೀಸರ್ ಇಂದು ಸರಿಗಮ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ  ಬಿಡುಗಡೆಯಾಗಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಂಯುಕ್ತ  ಹೊರನಾಡು, ಸುನಿಲ್, ವರಲಕ್ಷ್ಮಿ ಶರತಕುಮಾರ್, ಪ್ರಮೋದ್ ಶೆಟ್ಟಿ, ಅನಿರುದ್ಧ ಭಟ್, ಹಾಗೂ ಸುಕೃತ ವಾಗ್ಲೆ ಉಳಿದ ಪಾತ್ರವರ್ಗದಲ್ಲಿದ್ದಾರೆ. ವಿ ಕ್ರಿಯೇಶನ್ಸ್ ಹಾಗೂ ಕಿಚ್ಚ ಕ್ರಿಯೇಶನ್ಸ್ ನಿರ್ಮಾಣ ಮಾಡಿದ್ದು, ಎಸ್ ಆರ್ ಗಣೇಶ್ ಬಾಬು ಸಂಕಲನ, ಪೆರುಮಾಳ್ ಸೆಲ್ವಮ್ ವೇಷಭೂಷಣ, ಹಾಗೂ ಶೇಖರ್ಚಂದ್ರ ಛಾಯಾಗ್ರಹಣವಿದೆ. ಬಿ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular