HomeLatest Newsಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಬಗ್ಗೆ ಕಿಚ್ಚ ಸುದೀಪ್ ಫಸ್ಟ್ ರಿಯಾಕ್ಷನ್

ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಬಗ್ಗೆ ಕಿಚ್ಚ ಸುದೀಪ್ ಫಸ್ಟ್ ರಿಯಾಕ್ಷನ್

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ದ ಮಾತಿಗೆ ಬದ್ಧ, ಹೊರಗೆ ಒಂದು ಪಡೆ ಯುದ್ಧಕ್ಕೆ ಸಜ್ಜಾಗುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ‘ಮಾರ್ಕ್’ ಸಿನಿಮಾ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಿಚ್ಚ ತಮ್ಮ ಹೇಳಿಕೆಯ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.

ನಾನು ಯುದ್ಧಕ್ಕೆ ಸಿದ್ದ ಎಂದಿದ್ದು ಚಿತ್ರನಟ ದರ್ಶನ್ ಅವರಿಗಲ್ಲ, ದರ್ಶನ್ ಜೈಲಿಗೆ ಹೋಗುವ ವೇಳೆಯಲ್ಲಿ ಸುಮ್ಮನಿದ್ದ ನಾನು ಈಗ ಯಾಕೆ ಅವರ ವಿರುದ್ಧ ಮಾತನಾಡಲಿ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಪತ್ರಿಕಾಗೋಷ್ಠಿಗಳಿಂದ ದೂರವಿರುತ್ತಿದ್ದ ಸುದೀಪ್ ತಾವು ಆಡಿದ ಮಾತು ದರ್ಶನ್ ಅವರತ್ತ ತಿರುಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದೀಪ್ ಆಡಿದ್ದ ಮಾತು ವೈರಲ್ ಆಗಿ ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದಕ್ಕೆ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಇದ್ದಾಗ ಸದ್ದಿಲ್ಲದೇ ಇರುತ್ತಿದ್ದವರು ಈಗ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದರು. ನಂತರದಲ್ಲಿ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ಯುದ್ಧ ಜಾಲತಾಣದಲ್ಲಿ ಮುಂದುವರೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಬೆನ್ನಲ್ಲೇ ಸುದೀಪ್ ಸ್ಪಷ್ಟನೆ ನೀಡಿದ್ದು, ತಾವು ಮಾತನಾಡಿದ್ದು ಪೈರಸಿ ವಿರುದ್ಧ ಎಂದು ಹೇಳಿದ್ದಾರೆ. ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಪೈರಸಿಶಿ ಪದವನ್ನೇ ಅವರು ಬಳಸಿರಲಿಲ್ಲ.

ಈಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ ಸುದೀಪ್, ನಮ್ಮ ಸಿನಿಮಾ ಪೈರಸಿ ಮಾಡಲು ದೊಡ್ಡ ಯೋಜನೆ ಸಿದ್ಧವಾಗುತ್ತಿರುವ ವಿಚಾರ ನಮಗೆ ಗೊತ್ತಾಯಿತು. ಪೈರಸಿ ಬಗ್ಗೆ ಸುಮ್ಮನಿದ್ದು ಸಾಕಾಗಿದೆ. ಅದರ ವಿರುದ್ಧ ಹೋರಾಟಕ್ಕೆ ಯೋಚಿಸುತ್ತಿದ್ದೇನೆ. ಅದೇ ರೀತಿ ಇತರರ ಬಗ್ಗೆ ಮಾತನಾಡಬೇಕಾಗಿ ಬಂದಾಗ ನಾನು ನೇರವಾಗಿಯೇ ಮಾತನಾಡುತ್ತೇನೆ. ವಿಜಯಲಕ್ಷ್ಮಿ ಅವರು ನನ್ನ ಹೆಸರನ್ನು ಪ್ರಸ್ತಾಪಿಸಿಲ್ಲ. ವೇದಿಕೆ ಹತ್ತಿದವರು, ಮೀಡಿಯಾದಲ್ಲಿ ಮಾತನಾಡಿದವರು ಸಾಕಷ್ಟು ಮಂದಿ ಇದ್ದಾರೆ. ನನ್ನ ಬಗ್ಗೆಯೇ ಮಾತನಾಡಿದ್ದಾರೆ ಎಂದುಕೊಳ್ಳುವುದು ತಪ್ಪು. ನಾನು ಇಲ್ಲಿ ಪ್ರಾರ್ಥನೆ ಮಾಡುವಾಗ ಯಾವುದೋ ದೇವಾಲಯದಲ್ಲಿ ಗಂಟೆ ಹೊಡೆದರೆ ಅದಕ್ಕೆ ನಾನು ಹೇಗೆ ಜವಾಬ್ದಾರನಾಗುತ್ತೇನೆ ಎಂದು ಸುದೀಪ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular