ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘max’ ಇದೇ ಡಿಸೆಂಬರ್ 25 ರಂದು ತೆರೆ ಕಾಣಲಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಟ್ರೈಲರ್ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡುವುದರ ಕುರಿತು ಚಿತ್ರ ತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.
ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಸೇರಿದಂತೆ ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತ ಹೊರ್ನಾಡ್, ಸುಕೃತಾ ವಾಗ್ಲೆ, ಸುನಿಲ್, ಪ್ರಮೋದ್ ಶೆಟ್ಟಿ, ರೆಡಿನ್ ಕಿಂಗ್ಸ್ಲಿ, ಇಳವರಸು, ಅನಿರುದ್ಧ ಭಟ್, ಉಗ್ರಂ ಮಂಜು, ಕಾಮರಾಜು, ಕರಣ್ ಆರ್ಯ, ತೆರೆ ಹಂಚಿಕೊಂಡಿದ್ದು, ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದೆ. ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದು, ಎಸ್ ಆರ್ ಗಣೇಶ್ ಬಾಬು ಸಂಕಲನ, ಹಾಗೂ ಶೇಖರ್ ಚಂದ್ರ ಛಾಯಾಗ್ರಾಣವಿದೆ.