HomeKarnatakaBIG NEWS: ಕಿಚ್ಚ ಸುದೀಪ್ ಭೇಟಿಯ ಹಿಂದಿನ ಕಾರಣ ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಕಿಚ್ಚ ಸುದೀಪ್ ಭೇಟಿಯ ಹಿಂದಿನ ಕಾರಣ ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಟ ಕಿಚ್ಚ ಸುದೀಪ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುದೀಪ್ ಭೇಟಿ ಸೌಜನ್ಯಯುತ ಭೇಟಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಟ ಸುದೀಪ್ ಅವರದ್ದು ಸೌಜನ್ಯಯುತ ಭೇಟಿ. ಚಿತ್ರೀಕರಣದ ಜಾಗದ ವಿಚಾರವಾಗಿ ಮಾತನಾಡಲು ಬಂದಿದ್ದರು. ಚಿತ್ರೀಕರಣಕ್ಕೆ ತೊಂದರೆಯಾದ ಕಾರಣಕ್ಕೆ ಬಂದಿದ್ದರು. ಸಂಬಂಧಪಟ್ಟವರಿಗೆ ತಿಳಿಸುತ್ತೇನೆ ಎಂದು ಹೇಳಿದ್ದೇನೆ ಎಂದರು.

ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಅವರು ಒಬ್ಬ ಗೆಳೆಯರಾಗಿ ಬಂದು ಭೇಟಿಯಾಗಿದ್ದಾರೆ ಅಷ್ಟೇ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular