ನಟ ಕಿಚ್ಚ ಸುದೀಪ್ ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಚಿತ್ರದ ಬಗ್ಗೆ ನಟ ಸುದೀಪ್ ಬಿಗ್ ಅಪ್ ಡೇಟ್ ನೀಡಿದ್ದಾರೆ.
ಚಿತ್ರದ ಶೂಟಿಂಗ್ ಬಗ್ಗೆ ಇದುವರೆಗೆ ಯಾವುದೇ ಅಪ್ ಡೇಟ್ ಇರಲಿಲ್ಲ. ಸಂಕ್ರಾಂತಿ ಹಬ್ಬದ ಮರುದಿನ ನಟ ಸುದೀಪ್ ಅಭಿಮಾನಿಗಳಿಗೆ ಹೊಸ ಅಪ್ ಡೇಟ್ ನೀಡಿದ್ದಾರೆ.
ಸಂಕ್ರಾಂತಿ’ ನಂತರ ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭ ಮಾಡುತ್ತಿದ್ದೇನೆ. ಪೂರ್ಣಗೊಂಡ ಭಾಗಕ್ಕೆ ಎಲ್ಲಾ ನಟರಿಂದ ವಾಯ್ಸ್ ಓವರ್ ಗಳು ಮುಗಿದಿವೆ, ಮತ್ತು ಚಿತ್ರದ ಉಳಿದ ಭಾಗಗಳ ಚಿತ್ರೀಕರಣ ಪ್ರಗತಿಯಲ್ಲಿದೆ ಎಂದು ನಟ ಸುದೀಪ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನವೆಂಬರ್ ನಲ್ಲಿ ಮಳೆಯಿಂದ ಶೂಟಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್ ನಲ್ಲಿ ಕೆಲವು ಅಡೆತಡೆಗಳು ಎದುರಾದವು. ಈಗ ಸಂಕ್ರಾಂತಿ ಬಳಿಕ ಮತ್ತೆ ‘ಮ್ಯಾಕ್ಸ್’ ಶೂಟಿಂಗ್ ಶುರು ಆಗಿದೆ ಎಂದು ತಿಳಿಸಿದ್ದಾರೆ.
https://twitter.com/KicchaSudeep/status/1747048920847728645?ref_src=twsrc%5Etfw%7Ctwcamp%5Etweetembed%7Ctwterm%5E1747048920847728645%7Ctwgr%5E687af6aff0bc501bbac06991dcd870ec2027c386%7Ctwcon%5Es1_&ref_url=https%3A%2F%2Fpublictv.in%2Fsudeep-max-film-update-2%2F