ಸಮರ್ಜಿತ್ ಲಂಕೇಶ್ ನಟನೆಯ ‘ಗೌರಿ’ ಚಿತ್ರ ಇದೇ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ದಿನದಂದು ತೆರೆ ಕಾಣಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಆಗಸ್ಟ್ ಐದರಂದು ಈ ಸಿನಿಮಾ ಟ್ರೈಲರ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದ್ದು, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಕೈಯಲ್ಲಿ ಟ್ರೈಲರ್ ಲಾಂಚ್ ಮಾಡಿಸಲಿದ್ದಾರೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.
ಇಂದ್ರಜಿತ್ ಲಂಕೇಶ್ ನಿರ್ದೇಶನದ ಈ ಚಿತ್ರದಲ್ಲಿ ಸಮರ್ಜಿತ್ ಸೇರಿದಂತೆ ಸಾನ್ಯಾ ಅಯ್ಯರ್, ಮಾನಸಿ ಸುಧೀರ್, ಸಂಪತ್ ಮೈತ್ರೇಯ, ಲೂಸ್ ಮಾದ ಯೋಗಿ ತೆರೆ ಹಂಚಿಕೊಂಡಿದ್ದು, ಇಂದ್ರಜಿತ್ ಲಂಕೇಶ್ ಅವರೇ ಲಾಫಿಂಗ್ ಬುದ್ಧ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ಬಿಎ ಮಧು, ರಾಜಶೇಖರ್ ಕೆ ಎಲ್ ಹಾಗೂ ಮಾಸ್ತಿ ಅವರ ಸಂಭಾಷಣೆ, ಡಾಕ್ಟರ್ ರವಿವರ್ಮ ಮತ್ತು ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನವಿದೆ. ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಬರ್ಗಿ, ಅನಿರುದ್ಧ ಶಾಸ್ತ್ರಿ ಸಂಗೀತ ಸಂಯೋಜನೆ ನೀಡಿದ್ದಾರೆ.