ಬೆಂಗಳೂರು: ನಾಲ್ವರು ಕಾಲ್ ಸೆಂಟರ್ ಉದ್ಯೋಗಿಗಳನ್ನುನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಕಾನ್ಸ್ ಟೇಬಲ್ ಸೇರಿ 8 ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಛಲಪತಿ, ಭರತ್, ಪವನ್, ಪ್ರಸನ್ನ, ಅತೀಕ್, ಜಭಿವುಲ್ಲ ಸೇರಿದಂತೆ 8 ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಛಲಪತಿ ಕೋಲಾರ ಜಿಲ್ಲೆಯ ಹೆಡ್ ಕಾನ್ಸ್ ಟೆಬಲ್.
ಕೋರಮಂಗಲದ ಗ್ಲೋಬಲ್ ಕನೆಕ್ಟ್ ಟೆಲಿಕಾಂ ಪ್ರೈ.ಲಿ. ನ ನಾಲ್ವರು ಕಾಲ್ ಸೆಂಟರ್ ಉದ್ಯೋಗಿಗಳನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಬಳಿಕ ಮ್ಯಾನೇಜರ್ ಅಕೌಂಟ್ ನಿಂದ 18 ಲಕ್ಷ ರೂಒಆಯಿ ವರ್ಗಾವಣೆ ಮಾಡಿಸಿಕೊಂಡಿದ್ದರು. ಬೆಳಿಗ್ಗೆ ಬಿಪಿಒ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು 15 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದಾರೆ.
ಹೊಸಕೋಟೆಯ ಲಾಡ್ಜ್ ನಲ್ಲಿ ನಾಲ್ವರು ಉದ್ಯೋಗಿಗಳನ್ನು ಕೂಡಿ ಹಾಕಿದ್ದರು. ನಾಲ್ವರನ್ನು ರಕ್ಷಿಸಲಾಗಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ.
