HomeLatest NewsBIG NEWS: ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನ್ಯಾಪ್ ಕೇಸ್: ಕಾನ್ಸ್ ಟೇಬಲ್ ಸೇರಿ 8 ಆರೋಪಿಗಳು...

BIG NEWS: ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನ್ಯಾಪ್ ಕೇಸ್: ಕಾನ್ಸ್ ಟೇಬಲ್ ಸೇರಿ 8 ಆರೋಪಿಗಳು ಅರೆಸ್ಟ್

ಬೆಂಗಳೂರು: ನಾಲ್ವರು ಕಾಲ್ ಸೆಂಟರ್ ಉದ್ಯೋಗಿಗಳನ್ನುನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಕಾನ್ಸ್ ಟೇಬಲ್ ಸೇರಿ 8 ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಛಲಪತಿ, ಭರತ್, ಪವನ್, ಪ್ರಸನ್ನ, ಅತೀಕ್, ಜಭಿವುಲ್ಲ ಸೇರಿದಂತೆ 8 ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಛಲಪತಿ ಕೋಲಾರ ಜಿಲ್ಲೆಯ ಹೆಡ್ ಕಾನ್ಸ್ ಟೆಬಲ್.

ಕೋರಮಂಗಲದ ಗ್ಲೋಬಲ್ ಕನೆಕ್ಟ್ ಟೆಲಿಕಾಂ ಪ್ರೈ.ಲಿ. ನ ನಾಲ್ವರು ಕಾಲ್ ಸೆಂಟರ್ ಉದ್ಯೋಗಿಗಳನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಬಳಿಕ ಮ್ಯಾನೇಜರ್ ಅಕೌಂಟ್ ನಿಂದ 18 ಲಕ್ಷ ರೂಒಆಯಿ ವರ್ಗಾವಣೆ ಮಾಡಿಸಿಕೊಂಡಿದ್ದರು. ಬೆಳಿಗ್ಗೆ ಬಿಪಿಒ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು 15 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸಕೋಟೆಯ ಲಾಡ್ಜ್ ನಲ್ಲಿ ನಾಲ್ವರು ಉದ್ಯೋಗಿಗಳನ್ನು ಕೂಡಿ ಹಾಕಿದ್ದರು. ನಾಲ್ವರನ್ನು ರಕ್ಷಿಸಲಾಗಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular