HomeKarnatakaಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗು ಅಪಹರಿಸಿದ ತಮ್ಮ

ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗು ಅಪಹರಿಸಿದ ತಮ್ಮ

ದಾವಣಗೆರೆ: ಅಕ್ಕನ ಅಕ್ರಮ ಸಂಬಂಧದಿಂದ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿದ್ದ ತಮ್ಮನನ್ನು ದಾವಣಗೆರೆ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗೋಯಲ್(3)ನನ್ನು ಅಪಹರಿಸಿದ್ದ ತರುಣ್(17) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತರುಣ್ ಅಕ್ಕ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನೊಂದಿಗೆ ಅಕ್ರಮ ಸಂಬಂಧ ಬೆಳೆಸಿ ಆತದೊಂದಿಗೆ ವಾಸಿಸುತ್ತಿದ್ದಳು. ಈ ವಿಚಾರ ಗೊತ್ತಾದ ತಮ್ಮ ಅಕ್ರಮ ಸಂಬಂಧದಿಂದ ದೂರ ಇರುವಂತೆ ಹೇಳಿದ್ದಾನೆ. ಆದರೆ, ಆಕೆ ಈತನ ಮಾತಿಗೆ ಒಪ್ಪಿರಲಿಲ್ಲ.

ಅಕ್ಕನ ನಡೆಯಿಂದ ಬೇಸತ್ತು ಆಕೆಯ ಮಗುವನ್ನು ಅಪಹರಿಸಿಕೊಂಡು ಹೋಗಿದ್ದಾನೆ. ಅಕ್ಕ ಬೆಂಗಳೂರು ಪೊಲೀಸರಿಗೆ ವಿಷಯ ತಿಳಿಸಿದ್ದಾಳೆ. ಬಾಲಕ ಮಗುವಿನೊಂದಿಗೆ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿರುವ ವಿಚಾರ ತಿಳಿದು ದಾವಣಗೆರೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದಾವಣಗೆರೆಗೆ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲು ಬರುತ್ತಿದ್ದಂತೆ ಪ್ರಯಾಣಿಕರ ತಪಾಸಣೆ ನಡೆಸಿ ಅಪಹರಣ ಕೊಳಗಾಗಿದ್ದ ಮಗು ಮತ್ತು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular