HomeLatest Newsಅಪ್ರಾಪ್ತೆ ಅಪಹರಿಸಿ ಅತ್ಯಾಚಾರ: ಕಾಮುಕನಿಗೆ ಶಿಕ್ಷೆ

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ: ಕಾಮುಕನಿಗೆ ಶಿಕ್ಷೆ

ಕೊಪ್ಪಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕೊಪ್ಪಳ ನಗರದ ಬೇಲ್ದಾರ ಕಾಲೋನಿ ನಿವಾಸಿ ಮಾರುತಿ ಬೋಚನಹಳ್ಳಿ ಮೇಲಿನ ಆರೋಪ ಸಾಬೀತಾಗಿದೆ.

ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಕೊಪ್ಪಳ ತ್ವರಿತ ವಿಲೇವಾರಿ(ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.

ಈ ಪ್ರಕರಣದ ಅಪ್ರಾಪ್ತೆ ದಿ: 17-02-2024ರ 6 ತಿಂಗಳ ಹಿಂದೆ ತಮ್ಮ ಮನೆಯಲ್ಲಿರುವಾಗ ಮಾರುತಿ ಬೋಚನಹಳ್ಳಿ ಮನೆಗೆ ಹೋಗಿ ಮೈ ಕೈ ಮುಟ್ಟಿದ್ದು, ಅವಳು ಬೇಡ ಎಂದರೂ ಕೇಳದೇ ಅವಳ ಇಚ್ಚೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ್ದ. ದಿ: 17-02-2024 ರಂದು ಬಾಲಕಿಯನ್ನು ಕೊಪ್ಪಳ ಬಸ್ ನಿಲ್ದಾಣದಿಂದ ಅಪಹರಣ ಮಾಡಿಕೊಂಡು ಚಿಕ್ಕಸಿಂಧೋಗಿ ಗ್ರಾಮದ ಗಾಳೆಮ್ಮ ಗುಡಿ ಮುಂದೆ ಹೋಗಿ ಬಾಧಿತಳಿಗೆ ತಾಳಿ ಕಟ್ಟಿ ಬಾಲ್ಯ ವಿವಾಹವಾಗಿ ಅಲ್ಲಿಂದ ಅಳವಂಡಿ, ಮುಂಡರಗಿ, ಗದಗ ಮತ್ತು ಪುತ್ತೂರ ಸುಳ್ಯ ಮುಂತಾದ ಕಡೆಗಳಲ್ಲಿ ಸುತ್ತಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೊಪ್ಪಳ ಮಹಿಳಾ ಪೋಲಿಸ್ ಠಾಣೆಯ ರಿಜ್ವಾನ್, ನಾಗಪ್ಪ ಪಿ.ಎಸ್.ಐ ಇವರು ಬಾಧಿತಳ ತಾಯಿ ನೀಡಿದ ದೂರನ್ನು ಸ್ವೀಕರಿಸಿ ಪ್ರಥಮ ಹಂತದ ತನಿಖೆಯನ್ನು ನಿರ್ವಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ತನಿಖೆಯನ್ನು ಆಂಜಿನೇಯ ಡಿ.ಎಸ್, ಪಿಐ ಕೊಪ್ಪಳ ಮಹಿಳಾ ಠಾಣೆ ಇವರು ನಿರ್ವಹಿಸಿದ್ದು, ಮುಂದುವರೆದ ತನಿಖೆಯನ್ನು ಎಸ್.ಆರ್. ಪಾಟೀಲ ಹಾಗೂ ಮುತ್ತಣ್ಣ ಸಾವರಗೋಳ ಡಿಎಸ್‌ಪಿ ಕೊಪ್ಪಳ ಇವರು ಅಂತಿಮ ತನಿಖೆಯನ್ನು ನಿರ್ವಹಿಸಿದ್ದು, ಈ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಶಿವಕುಮಾರ ಹೆಚ್‌ಸಿ ಇವರು ತನಿಖಾ ಸಹಾಯಕ ಕರ್ತವ್ಯ ನಿರ್ವಹಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ. 70,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಕೊಪ್ಪಳ ತ್ವರಿತ ವಿಲೇವಾರಿ(ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಕುಮಾರ ಡಿ.ಕೆ. ಅವರು  ಜನವರಿ 24 ರಂದು ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು. ಕೊಪ್ಪಳ ಮಹಿಳಾ ಪೋಲಿಸ ಠಾಣೆಯ ಸಿಬ್ಬಂದಿ ಪ್ರಕಾಶ್ ಮತ್ತು ರಿಜ್ವಾನ್ ಡಬ್ಲ್ಯೂಎಚ್‌ಸಿ ಇವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರಪಡಿಸುವಲ್ಲಿ ಸಹಕರಿಸಿರುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ(ಪೋಕ್ಸೊ) ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular