ಬೆಂಗಳೂರು : ಬೆಂಗಳೂರಲ್ಲಿ 6 ವರ್ಷದ ಬಾಲಕಿಯ ಕಿಡ್ನ್ಯಾಪ್ & ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ನೆರೆಮನೆಯ ಸೈಕೋಪಾತಕಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಯೂಸುಫ್ ಮೀರ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ನಲ್ಲೂರಹಳ್ಳಿಯಲ್ಲಿ ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ. ಸಿಸಿಟಿವಿಯಲ್ಲಿ ದುಷ್ಕರ್ಮಿ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಕರೆದುಕೊಂಡು ಹೋಗುತ್ತಿರುವುದು ಸೆರೆಯಾಗಿದೆ. ಚಾಕೊಲೇಟ್ ಕೊಡಿಸುವ ಆಮಿಷದಲ್ಲಿ ಬಾಲಕಿಯನ್ನು ಕರೆದುಕೊಂಡು ಹೋದ ಕಿರಾತಕ ಆಕೆಯನ್ನು ಅಮಾನುಷವಾಗಿ ಕೊಂದು ಶವ ಬ್ಯಾಗ್ ನಲ್ಲಿ ಹಾಕಿ ಚರಂಡಿಗೆ ಎಸೆದಿದ್ದಾನೆ.
ಮೃತ ಬಾಲಕಿಯನ್ನು ಕೋಲ್ಕತ್ತಾ ಮೂಲದ ಶಹಜಾನ್ ಕಥೂನ್ (6) ಎಂದು ಗುರುತಿಸಲಾಗಿದೆ. ಮಗುವನ್ನ ಕೊಂದ ದುಷ್ಕರ್ಮಿ ಶವವನ್ನು ಬ್ಯಾಗಿನಲ್ಲಿ ಹಾಕಿ ಪರಾರಿಯಾಗಿದ್ದಾನೆ. ಬಾಲಕಿ ತಾಯಿ ಹಾಗೂ ಪಕ್ಕದ ಮನೆಯವರ ಜೊತೆ ಗಲಾಟೆ ಆಗಿತ್ತು ಎನ್ನಲಾಗಿದೆ. ತಾಯಿಗೆ ಬುದ್ದಿ ಕಲಿಸಲು 6 ವರ್ಷದ ಬಾಲಕಿಯ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮಗಳು ಕಾಣೆಯಾಗಿದ್ದಾಳೆ ಎಂದು ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಲ್ಲಾ ಕಡೆ ಹುಡುಕಾಡಿದ್ದಾರೆ. ನಂತರ ಬ್ಯಾಗ್ ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ವೈಟ್ ಫೀಲ್ಡ್ ಠಾಣೆ ಪೊಲೀಸರು ಸೈಕೋಪಾತಕಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ

