BIG NEWS: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಅಕ್ರಮ; ಸಮಿತಿ ರಚಿಸಿ 2 ವಾರದಲ್ಲಿ ವರದಿ ನೀಡಿವಂತೆ ಸಿಎಂ ಆದೇಶ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದ ಕಾರಣ ಹಾಗೂ ಔಷಧಿ ಖರೀದಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಕಿದ್ವಾಯಿ ಸಂಸ್ಥೆಯಲ್ಲಿ ಸಿಗದ ಸೂಕ್ತ ಚಿಕಿತ್ಸೆ ವಿಚಾರ ಹಾಗೂ ಟೆಂಡರ್, ಔಷಧಿ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದೇ ಅಕ್ರಮ ನಡೆದಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸಮಿತಿ ರಚಿಸಿ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಕಮಿಟಿ ರಚಿಸಿ, ಸಹಕಾರ ಇಲಾಖೆಯ ಒಬ್ಬ ಅಧಿಕಾರಿ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿ 2 ವಾರಗಳೊಳಗೆ ವರದಿ ನೀಡುವಂತೆ ಸಿಎಂ ಆದೇಶ ನೀಡಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read