HomeKarnatakaಹೃದಯವಿದ್ರಾವಕ ಘಟನೆ: ಎರಡು ವರ್ಷದ ಕಂದನ ಕೊಂದು ಮಹಿಳೆ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: ಎರಡು ವರ್ಷದ ಕಂದನ ಕೊಂದು ಮಹಿಳೆ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಮಗು ಕೊಲೆ ಮಾಡಿ ತಾಯಿ ನೇಣಿಗೆ ಶರಣಾಗಿದ್ದಾರೆ.

ಮರಪಳ್ಳಿ ಗ್ರಾಮದಲ್ಲಿ ವರ್ಷಿತಾ(2) ಕೊಲೆ ಮಾಡಿ ಶಿವಲೀಲಾ(23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ ಮತ್ತು ಅತ್ತೆಯ ಕಿರುಕುಳದಿಂದ ಶಿವಲೀಲಾ ತವರು ಮನೆ ಸೇರಿದ್ದರು. ಎರಡು ದಿನದ ಹಿಂದೆಯಷ್ಟೇ ಗಂಡನ ಮನೆಗೆ ಬಂದಿದ್ದರು. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular