ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಂದ ಪತಿ: ಪೊಲೀಸ್ ವಿಚಾರಣೆಗೆ ಹೆದರಿ ಪ್ರಿಯತಮೆ ಆತ್ಮಹತ್ಯೆ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ರವಿಚಂದ್ರ ಬಂಧಿತ ಆರೋಪಿ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ರವಿಚಂದ್ರನನ್ನು ಬಂಧಿಸಿದ್ದಾರೆ.

ಪತ್ನಿ ವೀಣಾ(20) ಕೊಲೆ ಮಾಡಿ ಆರೋಪಿ ನಾಪತ್ತೆ ಕೇಸ್ ದಾಖಲಿಸಿದ್ದ. ಎರಡು ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಮೇ 2 ರಂದು ನಾರಸಿಂಹನಹಳ್ಳಿ ಅರಣ್ಯದಲ್ಲಿ ವೀಣಾ ಶವ ಪತ್ತೆಯಾಗಿತ್ತು. ಪಕ್ಕದ ಮನೆ ಮಹಿಳೆ ಜೊತೆ ರವಿಚಂದ್ರ ಅನೈತಿಕ ಸಂಬಂಧ ಹೊಂದಿದ್ದ ವಿಚಾರ ತಿಳಿದ ಪತ್ನಿ ಗಲಾಟೆ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಹೀಗಾಗಿ ಪತ್ನಿಯ ಕೊಂದು ರವಿಚಂದ್ರ ನಾಪತ್ತೆ ಡ್ರಾಮಾ ಮಾಡಿದ್ದ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ರವಿಚಂದ್ರನನ್ನು ಬಂಧಿಸಿದ್ದಾರೆ. ಆರೋಪಿ ಬಂಧನ ಬೆನ್ನಲ್ಲೇ ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ವಿಚಾರಣೆಗೆ ಕರೆಯುತ್ತಾರೆ ಎಂದು ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read