ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ತೀವ್ರ ಖಂಡನೆ: ಪಾತಕಿಗಳಿಗೆ ಗರಿಷ್ಠ ಶಿಕ್ಷೆ ಕೊಡಿಸಿ ಸಾವಿಗೆ ನ್ಯಾಯ ಕೊಡಿಸುವ ಭರವಸೆ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಗಣೇಶ್ ಗೌಡ ಅವರ ಸಾವಿನಿಂದ ಅವರ ಕುಟುಂಬ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕೊಲೆಗೈದ ಪಾತಕಿಗಳು ಮತ್ತು ಅವರ ಹಿಂದಿರುವ ದುಷ್ಟಶಕ್ತಿಗಳನ್ನು ಪತ್ತೆಮಾಡಿ, ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆಗೆ ಒಳಪಡಿಸುವಂತೆ ನೋಡಿಕೊಳ್ಳುವ ಮೂಲಕ‌ ಅವರ ಸಾವಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ತಿಳಿಸಿದ್ದಾರೆ.

ಶಾಂತಿ, ಸಾಮರಸ್ಯ ಬಯಸುವ ಜನರ ವಿರುದ್ಧ ಶಸ್ತ್ರ ಹಿಡಿದು ಬರುವ ಪ್ರತಿ ಭಯೋತ್ಪಾದಕನನ್ನು ಕಾನೂನಿನ ಮೂಲಕವೇ ಹೆಡೆಮುರಿ ಕಟ್ಟುತ್ತೇವೆ. ಮೃತ ಗಣೇಶ್ ಕುಟುಂಬದ ಜೊತೆ ನಮ್ಮ ಪಕ್ಷ ಮತ್ತು ಸರ್ಕಾರ ದೃಢವಾಗಿ ನಿಲ್ಲಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಡಿಸಿಎಂ ಡಿಕೆ ಸಂತಾಪ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್‌ ಗೌಡನನ್ನು ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ. ಹಂತಕರ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮೃತ ಗಣೇಶ್‌ ಗೌಡನ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read