ಗೊಂಡ: ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಉತ್ತರ ಪ್ರದೇಶ ಗೊಂಡಾ ಜಿಲ್ಲಾ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿರ್ದೇಶ ನೀಡಿದೆ.
ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್, ಸಹಚರರಾದ ರಾಜೇಶ್ ಸಿಂಗ್, ಪಿಂಕು ಸಿಂಗ್ ಹಗೂ ಸಹದೇವ್ ಯಾದವ್ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಮಂಕಾಪುರ ಪೊಲೀಸ್ ಠಾಣೆಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.
ಮಂಕಾಪುರದ ಪ್ರದೇಶದ ಭಿತೌರ್ ನಿವಾಸಿ ಅಜಯ್ ಸಿಂಗ್ ಎಂಬುವವರು ತಮ್ಮ ಪತ್ನಿ ಮನಿಷಾ ಸಿಂಗ್ ಹೆಸರಿನಲ್ಲಿ ನೊಂದಾಯಿಸಲಾಗಿದ್ದ ಭೂಮಿಯನ್ನು ಮೂಲ ಮಾರಾಟಗಾರರಾದ ಬಿಟ್ಟನ್ ದೇವಿ ಎಂಬುವವರ ಮೇಲೆ ಪ್ರಭಾವಿ ಬೀರಿ ಮೂರು ವರ್ಷದ ಹಳೇ ಸ್ಟಾಂಪ್ ಪೇಪರ್ ಬಳಸಿ ಮಿಥಲೇಶ್ ರಸ್ತೋಗಿ ಹಾಗೂ ಕಾಂತಿ ಸಿಂಗ್ ಅವರ ಹೆಸರಿಗೆ ವರ್ಗಾಯಿಸುವ ಮೂಲಕ ಅವ್ಂಚಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಆರೋಪ ದೃಧಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.