ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರಾದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.
ಕಿಶ್ತ್ವಾರ ಜಿಲ್ಲೆಯ ಮಚೈಲ್ ಮಾತಾ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಯೋಗ್ಯವಾಗಿರುವ ಗ್ರಾಮದ ಚೋಸಿತಿಯಲ್ಲಿ ಗುರುವಾರ ಮಧ್ಯಾಹ್ನ ಲಂಗರ್ ನಲ್ಲಿ ಭಕ್ತರು ಊಟಕ್ಕೆ ಕುಳಿತಿದ್ದರು. ಈ ವೇಳೆ ಭೀಕರ ಮೇಘಸ್ಫೋಟದಿಂದ ದಿಢೀರ್ ಪ್ರವಾಹ, ಭೂಕುಸಿತವುಂಟಾಗಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಹಲವರು ಕಣ್ಮರೆಯಾಗಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಇಂದೂ ಮುಂದುವರೆದಿದೆ. ಇಲ್ಲಿಯವರೆಗೆ 21 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಚಶೋತಿ ಗ್ರಾಮದಿಂದ 15 ಕಿ.ಮೀ ದೂರದ ಪದ್ದಾರ್ ಎಂಬಲ್ಲಿ ಅಧಿಕಾರಿಗಳು ಪ್ರವಾಸಿಗರಿಗೆ ಹಾಗೂ ಕುಟುಂಬಸ್ಥವರನ್ನು ಕಳೆದುಕೊಂಡವರಿಗಾಗಿ ನಿಯಂತ್ರಣ ಕೊಠಡಿ, ಸಹಾಯ ಕೇಂದ್ರ ತೆರೆದಿದ್ದಾರೆ