BIG NEWS: ಅ. 23ರಂದು ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ

ಇದೇ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿಯನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು.

ಅ. 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ  200 ವರ್ಷ ಸಂದಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ಪ್ರಮುಖರೊಂದಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಲ್ಲಿ ಇದೇ 16.10.2024 ರಂದು ಆಗ್ರಹಿಸಲಾಗಿತ್ತು.

ತಕ್ಷಣವೇ ರಾಣಿ ಚೆನ್ನಮ್ಮನ ಅಂಚೆ ಚೀಟಿಯನ್ನು ಇದೇ ಅಕ್ಟೋಬರ್ 23ಕ್ಕೆ ಬಿಡುಗಡೆ ಮಾಡಲು ಭಾರತ ಸರ್ಕಾರ ನಿರ್ಧರಿಸಿದೆ. ಮೋದಿ ಸರ್ಕಾರದ ತ್ವರಿತ ನಿರ್ಧಾರ ಹಾಗೂ ಕಾರ್ಯರೂಪಕ್ಕೆ ಇದು ಕೈಗನ್ನಡಿ. ಇದು ಭಾರತ ಸರ್ಕಾರವು ರಾಣಿ ಚೆನ್ನಮ್ಮನಿಗೆ ಸಲ್ಲಿಸುತ್ತಿರುವ ಗೌರವ. ಈ ತ್ವರಿತ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ ಮೋದಿ,  ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಕೇಂದ್ರ ಸಂವಹನಾ ಸಚಿವಾಲಯಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

https://twitter.com/JoshiPralhad/status/1848336422090195098

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read