ಕಿತ್ತೂರು ಉತ್ಸವ: `ವೀರಜ್ಯೋತಿ’ಗೆ ಬೆಳಗಾವಿ ನಗರದಲ್ಲಿ ಅದ್ಧೂರಿ ಸ್ವಾಗತ

ಬೆಳಗಾವಿ : ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸೀಪ್ (ರಾಜು) ಸೇಠ್ ಅವರು ವೀರಜ್ಯೋತಿಗೆ ಪೂಜೆ ಸಲ್ಲಿಸುವ ಮೂಲಕ ಬರಮಾಡಿಕೊಂಡರು.

ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಬಾಬಾಸಾಹಬ್ ಪಾಟೀಲ, ಮಹಾನಗರ ಪಾಲಿಕೆ ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಷ್ಮಾ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪಾಲಿಕೆಯ ಸದಸ್ಯರು ಹಾಗೂ ಮತ್ತಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಸಕ ಆಸೀಫ್ (ರಾಜು) ಸೇಠ್ ಹಾಗೂ ಶಾಸಕ ಬಾಬಾಸಾಹಬ್ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಎಲ್ಲ ಗಣ್ಯರು ಚೆನ್ನಮ್ಮ ವೃತ್ತದಲ್ಲಿ ಇರುವ ಕಿತ್ತೂರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ‌ಮಾಡಿದರು.

ಇದಾದ ಬಳಿಕ ನಗರದ ಪ್ರಮುಖ ಮಾರ್ಗದಲ್ಲಿ ಸಂಚರಿಸಿದ ವೀರಜ್ಯೋತಿಯನ್ನು ಬೆಳಗಾವಿಯಿಂದ ನೇರವಾಗಿ ಚೆನ್ನಮ್ಮನ ಹುಟ್ಟೂರು ಕಾಕತಿ ಗ್ರಾಮಕ್ಕೆ ಬೀಳ್ಕೊಡಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read