HomeKarnatakaBIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಂ ಟಂ ವಾಹನ; ಸ್ಥಳದಲ್ಲೇ ದುರ್ಮರಣ

BIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಂ ಟಂ ವಾಹನ; ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಟಂ ಟಂ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ.

21 ವರ್ಷದ ಕಾವೇರಿ ಕಾಜಗಾರ ಮೃತ ವಿದ್ಯಾರ್ಥಿನಿ. ಕಿತ್ತೂರು ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿ. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ವಿದ್ಯಾರ್ಥಿನಿಗೆ ಟಂ ಟಂ ವಾಹನ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಿದ್ದ ವಿದ್ಯಾರ್ಥಿನಿ ಮೇಲೆಯೇ ವಾಹನ ಹರಿದಿದೆ.

ವಿದ್ಯಾರ್ಥಿನಿ ಕಾವೇರಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಟಂ ಟಂ ವಾಹನ ಚಾಲಕ ಅನಿಲ್ ಎಂಬಾತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಲಕನನ್ನು ವಶಕ್ಕೆ ಪಡೆದ ಕಿತ್ತೂರು ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular