ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಅಕ್ರಮ –ಸಕ್ರಮ, ನಿರಂತರ ಜ್ಯೋತಿ ಯೋಜನೆಯಡಿ ಹಳ್ಳಿಗಳಿಗೆ ವಿದ್ಯುತ್

ಚಿತ್ರದುರ್ಗ:  ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ.  ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿ, ಇನ್ನೂ 2 ಲಕ್ಷ ಪಂಪ್ ಸೆಟ್‍ ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ತೋಟದ ಮನೆಗಳಿಗೆ ಹಗಲು ಹೊತ್ತು 3 ಫೇಸ್ ಹಾಗೂ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಕೊಡಲು ಈಗಾಗಲೆ ನಿರ್ಣಯ ಮಾಡಲಾಗಿದ್ದು, ಎಲ್ಲ ಗ್ರಾಮಗಳಿಗೆ ನಿರಂತರ ಜ್ಯೋತಿಯಡಿ ವಿದ್ಯುತ್ ಪೂರೈಸಲು ಟೆಂಡರ್ ಪ್ರಕ್ರಿಯೆ ನಡೆದಿದ್ದು, ಶೀಘ್ರ ಕಾರ್ಯಾದೇಶ ನೀಡಲಾಗುವುದು ಎಂದರು.

ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕುಸುಮ್ ಬಿ ಮತ್ತು ಸಿ ಯೋಜನೆಗೆ ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಯೋಜನೆಯಿಂದಾಗಿ ರೈತರಿಗೆ ತಮ್ಮ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ಹಗಲಿನಲ್ಲಿ 7 ಗಂಟೆಗಳ ಕಾಲ ನಿರಂತರ ಗುಣಮಟ್ಟದ ವಿದ್ಯುತ್ ದೊರೆಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶಿವಣ್ಣ ಸೇರಿದಂತೆ ಇಂಧನ ಇಲಾಖೆಯ ಅಧಿಕಾರಿಗಳು, ರೈತರು ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read